ಉಡುಪಿ: ಪೇಜಾವರ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್, ಮೊದಲು ತಮ್ಮ ಮಠಗಳಲ್ಲಿರುವ ಹುಳುಕುಗಳನ್ನು ಮುಚ್ಚಕೊಳ್ಳಲಿ. ಬೇರೆ ಧರ್ಮಗಳಲ್ಲಿ ಕಡ್ಡಿ ಆಡಿಸುವುದು ನಿಲ್ಲಿಸಲಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಕಿಡಿಕಾರಿದ್ದರು.
ಈ ಹೇಳಿಕೆಗೆ ಟ್ವೀಟರ್ ಮೂಲಕ ತಿರುಗೇಟು ನೀಡಿರುವ ರಘುಪತಿ ಭಟ್, ಮಾಜಿ ಸಚಿವರಾದ ಎಂಬಿ ಪಾಟೀಲರೇ, ಧರ್ಮದ ವಿಚಾರವಾಗಿ ಪೇಜಾವರ ಶ್ರೀಗಳನ್ನು ನಿಂದಿಸುವ ಯಾವ ಯೋಗ್ಯತೆಯನ್ನೂ ನೀವು ಉಳಿಸಿಕೊಂಡಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮವನ್ನು ಒಡೆಯಲು ಮುಂದಾದವರು ನೀವು. ನೀವು ಎಷ್ಟು ಬೊಬ್ಬಿರಿದರೂ ಧರ್ಮ ಒಡೆದ ಪಾಪ ನಿಮ್ಮನ್ನು ಎಂದಿಗೂ ಬಿಡೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀರಶೈವರು ಹಾಗೂ ಲಿಂಗಾಯಿತರು ಹಿಂದೂಗಳೇ ಆಗಿದ್ದಾರೆ. ಇಬ್ಬರೂ ಬೇರೆಯಲ್ಲ. ಅನೇಕ ಸಂಪ್ರದಾಯಗಳ ಸಮ್ಮಿಲನವೇ ಒಂದು ಹಿಂದೂ ಧರ್ಮ ಎಂದು ಹೇಳಿದ್ದ ಪೇಜಾವರ ಶ್ರೀಗಳು, ಈ ವಿಚಾರವಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್ ಎಂ ಜಾಮದಾರ, ಸಾಣೀಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ, ಮಾಜಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಪ್ರತ್ಯೇಕ ಲಿಂಗಾಯತ ಧರ್ಮ ಸಮರ್ಥಕರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…