ಕಾರ್ಕಳ : ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಶಾಸಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ ಎಂದಿದ್ದಾರೆ.
ನಿನ್ನೆ ಧರ್ಮಸ್ಥಳದಲ್ಲಿ ನಡೆದ ಗಲಾಟೆ ಬಗ್ಗೆ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್ ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ?
ಹಿಂದು ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯೂ ಟ್ಯೂಬರ್ ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ?
ನಾಡಿನ ಪ್ರಮುಖ ವಾಹಿನಿಯ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನ ವ್ಯಕ್ತಿಗಳು ಹಲ್ಲೆ, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ? ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…