ದಾವಣಗೆರೆ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಎಂ.ಪಿ ರೇಣುಕಚಾರ್ಯ ಆಕ್ರೋಶ ಹೊರಹಾಕಿದ್ದಾರೆ.
ಹೊನ್ನಾಳಿಯಲ್ಲಿ ಧರ್ಮಸ್ಥಳದ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನು ಗುಂಡಿಕ್ಕಿ ಕೊಲ್ಲಬೇಕು. ಯಾರೋ ಒಬ್ಬ ಅನಾಮಿಕ ದೂರು ನೀಡಿದ್ದಾನೆ ಅಂತ ಎಸ್‍ಐಟಿ (SIT) ರಚನೆ ಮಾಡಿದ್ದಾರೆ. ಸರ್ಕಾರ ಅನಗತ್ಯವಾಗಿ ಎಸ್‍ಐಟಿ ರಚನೆ ಮಾಡಿದೆ. ಸುಜಾತಾ ಭಟ್‍ಗೆ ಮಗಳೇ ಇಲ್ಲ ಅಂತಿದ್ದಾರೆ, ಅವರು ನೀಡಿದ ದೂರು ಫೇಕ್ ಅಂತ ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.
ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಅನಾಮಿಕ ದೂರುದಾರನ ಪೂರ್ವಾಪರ ವಿಚಾರಣೆ ಮಾಡಬೇಕಿತ್ತು. ಈವರೆಗೂ ಎಸ್‍ಐಟಿ ಶೋಧ ಕಾರ್ಯಾಚರಣೆಯಲ್ಲಿ ಏನು ಸಿಕ್ಕಿಲ್ಲ. ಎಸ್‍ಐಟಿ ತನಿಖೆಯಲ್ಲಿ ಸತ್ಯಾಂಶ ಹೊರ ಬರಬೇಕು. ಅಪಪ್ರಚಾರ ಮಾಡಿದವರ ಕುರಿತು ತನಿಖೆ ಆಗಬೇಕು, ಅವರ ಹಿನ್ನೆಲೆ ಏನು ಎಂದು ತನಿಖೆ ಆಗಬೇಕು. ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಅನಾಮಿಕ ವ್ಯಕ್ತಿಗೆ ಮಂಪರು ಪರೀಕ್ಷೆ ಮಾಡಬೇಕು. ಸುಳ್ಳು ಹೇಳಿದ ಆತನನ್ನು ಗಲ್ಲಿಗೆ ಏರಿಸಬೇಕು ಎಂದು ಕಿಡಿಕಾರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…