Featured

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಿ : ಅಶ್ವಥ್ ನಾರಾಯಣ್ ಆಗ್ರಹ – vishwanews24

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಿ : ಅಶ್ವಥ್ ನಾರಾಯಣ್ ಆಗ್ರಹ

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ ಸದನದಲ್ಲಿ ಉತ್ತರ ಕೊಡುವ ವಿಚಾರವಾಗಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇವತ್ತು ಸದನದಲ್ಲಿ ಗೃಹ ಸಚಿವರು, ಸಿಎಂ, ಡಿಸಿಎಂ ಸದನದಲ್ಲಿ ಉತ್ತರ ಕೊಡಬೇಕಿದೆ. ಧರ್ಮಸ್ಥಳ ಪ್ರಕರಣದಲ್ಲಿ ಬಹಳ ಸ್ಪಷ್ಟವಾಗಿ ಉತ್ತರ ಕೊಡಲಿ. ಅನಾಮಿಕ ವ್ಯಕ್ತಿಯ ಬಗ್ಗೆಯು ತನಿಖೆ ಆಗಲಿ ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳನ್ನು ಮಾಡ್ತಿದ್ದಾರೆ. ಅವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಬೇಕು. ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರು ಕಾರಣ ಇಲ್ಲದೇ ಸುಮೋಟೋ ಕೇಸ್ ಹಾಕ್ತಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕೇಸ್ ಹಾಕಬೇಕು. ಪ್ರಕರಣದಲ್ಲಿ ಷಡ್ಯಂತ್ರ ಏನಾಗಿದೆ ಎಂದು ಹೇಳಬೇಕು. ಗಾಳಿಯಲ್ಲಿ ತೇಲಿಸುವ ಕೆಲಸ ಆಗಬಾರದು ಎಂದು ಆಗ್ರಹಿಸಿದ್ದಾರೆ.

ಅನಾಮಿಕ ವ್ಯಕ್ತಿಯು ಸುಪ್ರೀಂ ಕೋರ್ಟ್ಗೆ ಲಾಯರ್‌ಗಳನ್ನ ಇಟ್ಟುಕೊಂಡಿದ್ದು, ಇಷ್ಟ ಬಂದ ಹಾಗೆ ಕಥೆಯನ್ನ ಸೃಷ್ಟಿ ಮಾಡ್ತಿದ್ದಾರೆ. ಅನಾಮಿಕ ವ್ಯಕ್ತಿಯ ಮೂಲಕ ಸುಳ್ಳನ್ನೆ ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ. ಇದನ್ನ ಪಿಎಫ್‌ಐ, ಎಸ್‌ಡಿಪಿಐ ಮಾಡ್ತಿದೆ. ಅನಾಮಿಕ ವ್ಯಕ್ತಿ ಹಾಗೂ ಆತನ ಹಿಂದಿರುವ ವ್ಯಕ್ತಿಯ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago