ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮಾಥ್ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು, ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೇಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…