Featured

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಸಮಾವೇಶ – vishwanews24

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಸಮಾವೇಶ

ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ ಧರ್ಮಸ್ಥಳದಲ್ಲಿ ನಡೆಯಲಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಬಿಜೆಪಿಯ ಧರ್ಮಸ್ಥಳ ಚಲೋ ಸಮಾವೇಶ ಇಂದು ನಡೆಯಲಿದೆ. ಈಗಾಗಲೇ ಸಮಾವೇಶದ ಸಿದ್ದತೆ ಪೂರ್ಣಗೊಂಡಿದೆ. ಕಾರ್ಯಕರ್ತರು ಧರ್ಮಸ್ಥಳದತ್ತ ಬರುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮಸ್ಥಳದೆಡೆಗೆ ಬೃಹತ್‌ ಸಮಾವೇಶದ ಪೂರ್ವ ಸಿದ್ಧತೆಯನ್ನು ದ.ಕ. ಜಿಲ್ಲಾ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ| ಬ್ರಿಜೇಶ್‌ ಚೌಟ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರು ವೀಕ್ಷಿಸಿದರು.

ಕೇಂದ್ರ ಸಚಿವರುಗಳು ಆಗಮಿಸುವ ಕಾರಣ ವಿಶೇಷ ಮಿಲಿಟರಿ ಪಡೆ ನಿಯೋಜಿಸಲಾಗಿದೆ. ಉಜಿರೆಯಿಂದ ನಿಡ್ಲೆವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಕೇಸರಿ ಭಾವುಟ ಹಾಕಲಾಗಿದೆ. ಉಡುಪಿ-ಶಿವಮೊಗ್ಗ-ಉತ್ತರ ಕನ್ನಡದಿಂದ ಆಗಮಿಸುವ ಮಂದಿಗೆ ಉಜಿರೆ ಎಸ್‌ಡಿಎಂ ಎಂಜಿನಿಯರಿಂಗ್‌ ಕಾಲೇಜು ಕ್ರೀಡಾಂಗಣದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಶಿರಾಡಿ-ಸಂಪಾಜೆ-ಘಾಟ್‌ ಭಾಗದಿಂದ ಬರುವ ಮಂದಿಗೆ ಉಜಿರೆ ಅಜ್ಜರಕಾಡು ಗ್ರೌಂಡ್‌ನ‌ಲ್ಲಿ ಪಾರ್ಕಿಂಗ್‌ ಕಲ್ಪಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಬರುವ ಮಂದಿಗೆ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗ ವ್ಯವಸ್ಥೆ ಮಾಡಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago