ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಖಂಡಿಸಿ ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ ಧರ್ಮಸ್ಥಳದಲ್ಲಿ ನಡೆಯಲಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಬಿಜೆಪಿಯ ಧರ್ಮಸ್ಥಳ ಚಲೋ ಸಮಾವೇಶ ಇಂದು ನಡೆಯಲಿದೆ. ಈಗಾಗಲೇ ಸಮಾವೇಶದ ಸಿದ್ದತೆ ಪೂರ್ಣಗೊಂಡಿದೆ. ಕಾರ್ಯಕರ್ತರು ಧರ್ಮಸ್ಥಳದತ್ತ ಬರುತ್ತಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮಸ್ಥಳದೆಡೆಗೆ ಬೃಹತ್ ಸಮಾವೇಶದ ಪೂರ್ವ ಸಿದ್ಧತೆಯನ್ನು ದ.ಕ. ಜಿಲ್ಲಾ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ| ಬ್ರಿಜೇಶ್ ಚೌಟ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರು ವೀಕ್ಷಿಸಿದರು.
ಕೇಂದ್ರ ಸಚಿವರುಗಳು ಆಗಮಿಸುವ ಕಾರಣ ವಿಶೇಷ ಮಿಲಿಟರಿ ಪಡೆ ನಿಯೋಜಿಸಲಾಗಿದೆ. ಉಜಿರೆಯಿಂದ ನಿಡ್ಲೆವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಕೇಸರಿ ಭಾವುಟ ಹಾಕಲಾಗಿದೆ. ಉಡುಪಿ-ಶಿವಮೊಗ್ಗ-ಉತ್ತರ ಕನ್ನಡದಿಂದ ಆಗಮಿಸುವ ಮಂದಿಗೆ ಉಜಿರೆ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಿರಾಡಿ-ಸಂಪಾಜೆ-ಘಾಟ್ ಭಾಗದಿಂದ ಬರುವ ಮಂದಿಗೆ ಉಜಿರೆ ಅಜ್ಜರಕಾಡು ಗ್ರೌಂಡ್‌ನಲ್ಲಿ ಪಾರ್ಕಿಂಗ್ ಕಲ್ಪಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಬರುವ ಮಂದಿಗೆ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗ ವ್ಯವಸ್ಥೆ ಮಾಡಲಾಗಿದೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…