Featured

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಸೆಪ್ಟೆಂಬರ್ 14 ರಂದು ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ – vishwanews24

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಸೆಪ್ಟೆಂಬರ್ 14 ರಂದು ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ

ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ದ ಕೇಳಿ ಬರುತ್ತಿರುವ ಅಪಚಾರ ಖಂಡಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ನೇತೃತ್ವದಲ್ಲಿ ಸೆಪ್ಟೆಂಬರ್ 14 ರಂದು ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ.

ಈ ಯಾತ್ರೆಯಲ್ಲಿ 1,500ಕ್ಕೂ ಅಧಿಕ ಸಹಕಾರಿ ಸಂಘಗಳು, 3 ಸಾವಿರಕ್ಕೂ ವಾಹನಗಳು ಭಾಗಿಯಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಯಾತ್ರೆ ಆರಂಭವಾಗಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ, ಸಹಕಾರಿ ಧುರೀಣ ಶಶಿಕುಮಾ‌‌ರ್ ರೈ ಬ್ಯಾಲೊಟ್ಟು ತಿಳಿಸಿದ್ದಾರೆ. ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಜಿರೆಯಿಂದ ಹೊರಟ ಸಹಕಾರಿಗಳ ಯಾತ್ರೆ ಧರ್ಮಸ್ಥಳ ತಲುಪಿದ ಬಳಿಕ ಮಧ್ಯಾಹ್ನ ಅಮೃತ ವರ್ಷಿಣಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಶೀರ್ವಚನ ನೀಡಲಿದ್ದು, ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಅಭಿನಂದನೆ ಸಲ್ಲಿಸಲಿದ್ದಾರೆ ಎಂದರು.

ಸಹಬಾಳ್ವೆಯ ಪ್ರತೀಕವಾಗಿರುವ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ ಕ್ಷೇತ್ರ. ಇಂತಹ ಪಾವಿತ್ರ್ಯತೆಯ ಪೂಜನೀಯ ಕ್ಷೇತ್ರಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತ್ರವನ್ನು ವಿರೋಧಿಸಿ ಅವಿಜಿತ ಜಿಲ್ಲೆಯ ಸಹಕಾರಿಗಳು ಧರ್ಮಜಾಗೃತಿ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು. ಧಾರ್ಮಿಕ ಕ್ಷೇತ್ರಗಳ ಮೇಲೆ ಅಪಪ್ರಚಾರ ಮಾಡುವ ಷಡ್ಯಂತರಿಗಳ ವಿರುದ್ಧಈ ಯಾತ್ರೆ ಆಯೋಜಿಸಲಾಗಿದೆ. ಅವಿಭಜಿತ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ ಪರಸ್ಪರ ಸಹಬಾಳ್ವೆಯಿಂದ ಕಾರ್ಯನಿರ್ವಹಿಸುತ್ತಿವೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ ಈ ಧರ್ಮ ಕ್ಷೇತ್ರಕ್ಕೆ ಅಪಚಾರ ಎಸಗುವ ಷಡ್ಯಂತರಿಗಳಿಗೆ ಸ್ಪಷ್ಟ ಸಂದೇಶ ನೀಡುವ ಚಾರಿತ್ರಿಕ ಯಾತ್ರೆ ಈ ಧರ್ಮ ಜಾಗೃತಿ ಯಾತ್ರೆಯಿಂದ ನಡೆಯಲಿದೆ ಎಂದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago