ಧರ್ಮಸ್ಥಳ: ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್ ಪುರದ ನಿವಾಸಿ ಸುನಿಲ್ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ಆ ಬಳಿಕ ದೇವರ ದರ್ಶನ ಮುಗಿಸಿ ಮಧ್ಯಾಹ್ನದ ಅನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿಯುತ್ತಾ ತನ್ನ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದರು.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತತ್‌ಕ್ಷಣ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ಸಿಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿದ್ದರು. ಉಜಿರೆ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ.
ಸುನಿಲ್ ಊರಿನಲ್ಲಿ ಪಾದರಕ್ಷೆಯ ಮಳಿಗೆಯನ್ನು ಹೊಂದಿದ್ದು, ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದೆ. ದಂಪತಿ ನಡುವೆ ಉಂಟಾದ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿ ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಬಿಜೆಪಿಗೆ ಯಾರು ಸೂಕ್ತ ಅಭ್ಯರ್ಥಿ….?? ಓದಿ ಮೊರಲ್ ಸರ್ವೆ ವರದಿ vishwanews24 –
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…