Featured

ಧರ್ಮಸ್ಥಳ ಕೇಸ್ : ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ – vishwanews24

ಧರ್ಮಸ್ಥಳ ಕೇಸ್ : ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.

ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.

ನೇತ್ರಾವತಿ ನದಿ ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎಂದು ವರದಿಯಾಗಿದೆ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

6 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

7 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago