ಉಡುಪಿ: ರಾಜ್ಯ ಸರಕಾರದ ರಚಿಸಿದ ಎಸ್ಐಟಿ ತಂಡ ನಡೆಸುತ್ತಿರುವ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಈವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ಎಸ್ಐಟಿ ತಂಡ ನೀಡದಿದ್ದರೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆ ಮೂಲಕ ತೇಜೋವಧೆಗೆ ಯತ್ನಿಸುತ್ತಿರುವ ಹಿಂದೂ ವಿರೋಧಿ ಶಕ್ತಿಗಳ ಬಗ್ಗೆಯೂ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಎಸ್ಐಟಿ ಮೂಲಕ ತನಿಖೆ ನಡೆಸಿ ಸತ್ಯಾಸತ್ಯತೆ ಜನರ ಮುಂದಿಡಲು ಮುಂದಾಗಿದ್ದು ಸ್ವಾಗತಾರ್ಹ. ಆದರೆ ಈ ಸಂದರ್ಭದಲ್ಲಿ ಕಮ್ಯೂನಿಸ್ಟ್ ಮನಸ್ಥಿತಿಯ ಜಾಲಗಳು ವ್ಯವಸ್ಥಿತವಾಗಿ ಹಿಂದುಗಳ ಶ್ರದ್ಧಾಭಕ್ತಿಯ ಕೇಂದ್ರವಾಗಿರುವ ಹಲವು ಶತಮಾನಗಳ ಐತಿಹ್ಯವಿರುವ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುವ ಮೂಲಕ ಕೋಟ್ಯಂತರ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಯತ್ನಿಸುತ್ತಿದೆ.
ಈ ಎಲ್ಲಾ ಹಿಂದೂ ವಿರೋಧಿಗಳ ಶಕ್ತಿಗಳ ಹಿಂದೆ ಹಲವು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಭಾವಿ ಹುದ್ದೆಯಲ್ಲಿದ್ದ ತಮಿಳುನಾಡಿನ ಸಂಸದರೊಬ್ಬರು ತೆರೆಮರೆಯಲ್ಲಿ ಸೂತ್ರಧಾರಿಯಾಗಿ ಕೈಜೋಡಿಸಿರುವ ಬಗ್ಗೆಯು ರಾಜ್ಯ ಮಟ್ಟದ ದಿನ ಪತ್ರಿಕೆಯಲ್ಲಿ ವರದಿಯಾಗಿದ್ದು, ಈ ಎಲ್ಲಾ ಬೆಳವಣಿಗೆಯ ಹಿಂದೆ ಧರ್ಮಸ್ಥಳ ಕ್ಷೇತ್ರದ ತೇಜೋವಧೆಗೆ ವ್ಯವಸ್ಥಿತ ಜಾಲವೇ ಕಾರ್ಯ ನಿರ್ವಹಿಸುತ್ತಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿ ಒದಗಿಸಿದಂತಾಗಿದೆ.
ಕರಾವಳಿ ಜಿಲ್ಲೆಯ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದ್ದು, ತನಿಖೆ ಪ್ರಗತಿಯ ಹಂತದಲ್ಲಿರುವ ಸಂದರ್ಭದಲ್ಲಿ ಇಂತಹ ಆಧಾರರಹಿತ ಹೇಳಿಕೆಗಳು ತನಿಖೆಯ ಮೇಲೆಯೂ ಪರೋಕ್ಷ ಪ್ರಭಾವ ಬೀರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ತಕ್ಷಣ ಈ ಹಿಂದು ವಿರೋಧಿ ಶಕ್ತಿಗಳ ಕೈವಾಡದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಹಿಂದುಗಳ ಶ್ರದ್ಧಾಭಕ್ತಿಯ ಕೇಂದ್ರಗಳ ತೇಜೋವಧೆಗೆ ಮುಂದಾಗಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಧರ್ಮಸ್ಥಳ ಸಹಿತ ಹಿಂದೂ ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆ, ಭಕ್ತರ ಶ್ರದ್ಧಾ ಭಾವನೆಗಳನ್ನು ಕಾಪಾಡಲು ಸರ್ಕಾರ ಮುಂದಾಗಬೇಕಿದೆ ಎಂದು ಯಶ್ ಪಾಲ್ ಸುವರ್ಣ ಅಗ್ರಹಿಸಿದ್ದಾರೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…