ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್‌ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್‌ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ಮಾಡಿದ್ದೇವೆ ಎಂದು ತಿಳಿಸಿದರು.
ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ ಸಿಕ್ಕಿರುವ ಬಗ್ಗೆ ನೀವೆಲ್ಲ ವರದಿ ಮಾಡಿದ್ದೀರಿ. ಇದರ ಹೊರತುಪಡಿಸಿ ಗುಡ್ಡದಲ್ಲಿ ಒಂದಷ್ಟು ಮೂಳೆಗಳು ಸಿಕ್ಕಿದ್ದು, ಎಫ್‌ಎಸ್‌ಎಲ್ ಗೆ ಕಳಿಸುವ ಕೆಲಸ ಎಸ್‌ಐಟಿ ಮಾಡಿದೆ ಎಂದರು..
ಇದರ ಹಿನ್ನೆಲೆಯಲ್ಲಿ ಅಥವಾ ಸಂಬಂಧಪಟ್ಟಂತೆ ಎರಡು ಗುಂಪುಗಳ ಮಧ್ಯೆ ನಿನ್ನೆ ದಿನ ಘರ್ಷಣೆಯಾಗಿದೆ. ದೂರು, ಪ್ರತಿದೂರು ಕೊಟ್ಟಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಅದನ್ನ ತನಿಖೆ ಮಾಡುತ್ತಾರೆ. ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಎಸ್‌ಐಟಿ ಹಾಗೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದು ತಿಳಿಸಿದರು.
ಧರ್ಮಸ್ಥಳದ ವಿಚಾರದಲ್ಲಿ ಯಾರೋ ಹೇಳಿಕೆ ಕೊಡುತ್ತಾರೆ ಅದು ನಮಗೆ ಮುಖ್ಯವಲ್ಲ. ಎಸ್‌ಐಟಿಯವರು ತನಿಖೆಯನ್ನು ತಾಂತ್ರಿಕವಾಗಿ ಮತ್ತು ಆಧುನಿಕವಾಗಿ ಸತ್ಯ ಹೊರಗೆ ಬರುವ ರೀತಿಯಲ್ಲಿ ಮಾಡಬೇಕು. ಆ ಕೆಲಸವನ್ನು ಎಸ್‌ಐಟಿ ಮಾಡುತ್ತದೆ. ಅವರನ್ನು ಈಗಲೇ ಪ್ರಶ್ನೆ ಮಾಡಿದರೆ ತನಿಖೆಗೆ ಅರ್ಥ ಬರುವುದಿಲ್ಲ ಎಂದರು.
ಎಸ್‌ಐಟಿ ಸರಿಯಾಗಿ ತನಿಖೆ ಮಾಡುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಸೆರಿಯಾಗಿ ತನಿಖೆ ಆಗುತ್ತಿಲ್ಲ ಎಂದು ಇನ್ನೂ ಕೆಲವರು ಹೇಳುತ್ತಿದ್ದಾರೆ. ಇವರೆ ಎಲ್ಲ ಸಲಹೆ ಕೊಡುತ್ತಾರೆ. ರೆಡಾರ್ ತರಬೇಕು ಎನ್ನುತ್ತಿದ್ದಾರೆ. ಅವರು ಹೇಳಿದ ರೀತಿ ತನಿಖೆ ಮಾಡಲು ಆಗುತ್ತದೆಯೇ? ಪೊಲೀಸರು ಸಮರ್ಥರಿದ್ದಾರೆ. ತನಿಖೆ ಮಾಡುತ್ತಾರೆ. ಎಸ್‌ಐಟಿ ತನಿಖೆಯ ಬಗ್ಗೆ ಸರಕಾರ ಯಾವುದೇ ಡೈರೆಕ್ಷನ್ಸ್ ಕೊಡುವುದಿಲ್ಲ ಎಂದು ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…