ಧರ್ಮಸ್ಥಳ: ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 54ನೇ ವರ್ಧಂತಿ ಅಕ್ಟೋಬರ್ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೋವಿಡ್ ನಿಯಮಗಳೊಂದಿಗೆ ಸರಳವಾಗಿ ನಡೆಯಲಿದೆ.
ಅಕ್ಟೋಬರ್ 24ರಂದು ಬೆಳಿಗ್ಗೆ ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.
ಪಟ್ಟಾಭಿಷೇಕದ ದಿನದಂದೇ ನಾಡಿನಾದ್ಯಂತ ಧಾರ್ಮಿಕ ಕ್ಷೇತ್ರಗಳ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು, ಗ್ರಾಮಸ್ಥರು ಕ್ಷೇತ್ರಕ್ಕೆ ಆಗಮಿಸಿ ಡಾ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಡಾ ಡಿ ವೀರೇಂದ್ರ ಹೆಗ್ಗಡೆಯವರು 1968ರ ಅಕ್ಟೋಬರ್ 24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಆಗ ಅವರು 29 ವರ್ಷದ ಯುವಕರಾಗಿದ್ದರು.
2012ರ ಅಕ್ಟೋಬರ್ 24ರಂದು 50 ವರ್ಷಗಳ ಸೇವೆ ಪೂರೈಸಿದ್ದು, 2018ರ ಅಕ್ಟೋಬರ್ 24ರವರೆಗೆ ವೈವಿಧ್ಯಮ ಕಾರ್ಯಕ್ರಮಗಳೊಂದಿಗೆ ಸುವರ್ಣ ಮಹೋತ್ಸವ ಆಚರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ, ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ, ಮಹಾನಡಾವಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ, ಸಿರಿ ಗ್ರಾಮೋದ್ಯೋಗ, ನೈರ್ಮಲ್ಯ ಯೋಜನೆಗಳು ಸೇರಿದಂತೆ ಹತ್ತುಹಲವು ಜನಪರ ಕಾರ್ಯಕ್ರಮಗಳ ನಿರ್ಮಾತೃರಾಗಿದ್ದಾರೆ ಹೆಗ್ಗಡೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…