Featured

ಧರ್ಮಸ್ಥಳ ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ – vishwanews24

ಧರ್ಮಸ್ಥಳ ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ : ಬಜರಂಗದಳ ಆರೋಪ

ಧರ್ಮಸ್ಥಳ: ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಎಸೆದಿರುವ ಕೃತ್ಯದ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹುನ್ನಾರ ಇದೆ ಎಂದು ಆರೋಪಿಸಿರುವ ಹಿಂದು ಸಂಘಟನೆಗಳು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.

ಧರ್ಮಸ್ಥಳದ ಪುಣ್ಯನದಿಯಾಗಿರುವ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ. ಇದರ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ ಇದೆ ಎಂದು ಬಜರಂಗ ದಳ ಗಂಭೀರ ಆರೋಪ ಮಾಡಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕೆಲ ದಿನಗಳ ಹಿಂದೆ ಗೋಮಾಂಸದ ತ್ಯಾಜ್ಯಗಳನ್ನು ಮೂಟೆಕಟ್ಟಿ ತಂದು ಎಸೆಯಲಾಗಿದೆ. ಪಶ್ಚಿಮ ಘಟ್ಟದಿಂದ ಹರಿದು ಧರ್ಮಸ್ಥಳ ಬಳಿ ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ಹೊಳೆಯಲ್ಲಿ ಮೂಟೆಗಟ್ಟಲೆ ಗೋವಿನ ರುಂಡ, ಮುಂಡ, ಚರ್ಮ ಎಸೆದಿರುವುದು ಕಂಡು ಬಂದಿದೆ.

ಮೃತ್ಯುಂಜಯ ನದಿಯಲ್ಲಿ ನಿತ್ಯ ಇಲ್ಲಿನ ಅಯ್ಯಪ್ಪ ವ್ರತಧಾರಿಗಳು ಸ್ನಾನ ಮಾಡುತ್ತಾರೆ. ಅಲ್ಲದೆ ಮೃತ್ಯುಂಜಯ ನದಿ ತುಸುದೂರ ಹರಿದು ನೇತ್ರಾವತಿ ನದಿಗೆ ಸೇರುತ್ತದೆ. ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನಿತ್ಯ ಸಾವಿರಾರು ಭಕ್ತರು ನೇತ್ರಾವತಿಯಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಧರ್ಮಸ್ಥಳ ದೇಗುಲದ ಮಂಜುನಾಥ ಸ್ವಾಮಿಯ ನಿತ್ಯ ಅಭಿಷೇಕಕ್ಕೂ ನೇತ್ರಾವತಿಯ ನದಿಯ ನೀರನ್ನೇ ಬಳಸಲಾಗುತ್ತಿದೆ. ಅಯ್ಯಪ್ಪ ಭಕ್ತರು ಮತ್ತು ಧರ್ಮಸ್ಥಳದ ಪಾವಿತ್ರ್ಯ ಕೆಡಿಸುವ ಉದ್ದೇಶದಿಂದ ನದಿಗೆ ಗೋಮಾಂಸ ಎಸೆದಿದ್ದು, ಇದರಲ್ಲಿ ದೊಡ್ಡ ಕೋಮು ಷಡ್ಯಂತ್ರವಿದೆ ಎಂದು ಬಜರಂಗ ದಳ ಆರೋಪಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

22 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago