Featured

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ – vishwanews24

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ  ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಹೇಟ್‌ ಸ್ಪೀಚ್‌ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ  ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್‌ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.

ಫೇಕ್ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರ್ಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago