ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಹೇಟ್ ಸ್ಪೀಚ್ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.
ಫೇಕ್ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರ್ಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…