ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಎದುರಾಗಿದೆ. ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅಲ್ಲದೆ, ಈತ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ.
ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್ ಅವರು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಅಧಿಕೃತ ಸ್ಪಷ್ಟನೆ ನೀಡಿರುವ ಅವರು, ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು ಕಿಡಿಕಾರಿದ್ದಾರೆ.
‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾಜ್ ಪೋಸ್ಟ್ ನಲ್ಲಿ ಹೇಳಿದ್ದಾರೆ.
‘ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣದ ಹಿಂದೆ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ತಾವು ಹೇಳಿದಂತೆ ನಡೆದುಕೊಳ್ಳದೆ ಇದ್ದರೆ ಕೊಲೆ ಮಾಡುವ ಬೆದರಿಕೆ ಕೂಡ ಇತ್ತು ಎಂದು ಆರೋಪಿಸಿದ್ದಾನೆ.
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…