ಬೆಂಗಳೂರು : ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಆರೋಪಿಸಿದ ಅವರು, ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದರು.
ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ ಕೊಡುವುದಿಲ್ಲ. ಆದರೆ ಯೂಟ್ಯೂಬ್ನಲ್ಲಿ ಬೇಕಾದ ಹಾಗೆ ಮಾತಾಡಬಹುದಾ? ಇಷ್ಟಕ್ಕೂ ಆ ಭೀಮ ಯಾರು, ಮಂಪರು ಪರೀಕ್ಷೆ ಮಾಡಿದ್ದೀರಾ? ಆತ ತೋರಿಸಿದ 17 ಸ್ಥಳದಲ್ಲಿ 16 ಸ್ಥಳದಲ್ಲಿ ಏನೂ ಸಿಕ್ಕಿಲ್ಲ. ಸತ್ಯಾಸತ್ಯತೆ ಮನವರಿಕೆಯಾಗದೆ ತನಿಖೆ ಮಾಡುತ್ತಿದ್ದಾರೆ. ಇದರ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರಿದ್ದಾರೆ. ಶ್ರದ್ಧೆಗೆ ಧಕ್ಕೆಯಾದರೆ ಮತಾಂತರದ ಬೆಳೆ ತೆಗೆಯಬಹುದು. ಅದಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…