Judge and gavel in courtroom
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪ್ರಕರಣ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್‌ಗೆ ‘ಸುಳ್ಳು ಸಾಕ್ಷಿ’ ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ 26ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆನ.20ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ವರದಿ ಸಲ್ಲಿಸಿ ದ್ದರು. ಇನ್ನು, ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದಾನೆ.
ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಡಿ.26 ರಂದು 12 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಿ ಎಸ್‌ಐಟಿ ಕಚೇರಿಗೆ ಸಹಿ ಹಾಕಿ ತೆರಳಿದ್ದಾನೆ.ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ವಶಪಡಿಸಿಕೊಂಡಿರುವ ತಮ್ಮ ಮೊಬೈಲ್ ಫೋನ್‌ಗಳನ್ನು ಬಿಟ್ಟುಕೊಡಲು ಸೂಚಿಸಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಮತ್ತು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಲಾಗಿದೆ.
ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ.
ಎಸ್‌ಐಟಿ 3,923 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿ 1,100 ಪುಟಗಳ ಪ್ರತಿಯನ್ನು ನ್ಯಾಯಾಲಯವು ಜಯಂತ್‌ರಿಗೆ ನೀಡಿರುವುದಾಗಿ ತಿಳಿದುಬಂದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…