Featured

ಧರ್ಮಸ್ಥಳ ಪ್ರಕರಣ : ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ. 29ಕ್ಕೆ ಮುಂದೂಡಿಕೆ – vishwanews24

ಧರ್ಮಸ್ಥಳ ಪ್ರಕರಣ : ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ. 29ಕ್ಕೆ ಮುಂದೂಡಿಕೆ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪ್ರಕರಣ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್‌ಗೆ ‘ಸುಳ್ಳು ಸಾಕ್ಷಿ’ ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ 26ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.

ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆನ.20ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ವರದಿ ಸಲ್ಲಿಸಿ ದ್ದರು. ಇನ್ನು, ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದಾನೆ.

ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಡಿ.26 ರಂದು 12 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಿ ಎಸ್‌ಐಟಿ ಕಚೇರಿಗೆ ಸಹಿ ಹಾಕಿ ತೆರಳಿದ್ದಾನೆ.ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ವಶಪಡಿಸಿಕೊಂಡಿರುವ ತಮ್ಮ ಮೊಬೈಲ್ ಫೋನ್‌ಗಳನ್ನು ಬಿಟ್ಟುಕೊಡಲು ಸೂಚಿಸಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಮತ್ತು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಲಾಗಿದೆ.

ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ.

ಎಸ್‌ಐಟಿ 3,923 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿ 1,100 ಪುಟಗಳ ಪ್ರತಿಯನ್ನು ನ್ಯಾಯಾಲಯವು ಜಯಂತ್‌ರಿಗೆ ನೀಡಿರುವುದಾಗಿ ತಿಳಿದುಬಂದಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

9 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

10 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

10 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

10 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

12 hours ago