ಧರ್ಮಸ್ಥಳ ಪ್ರಕರಣ : ಎಸ್ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ : ಜಿ.ಪರಮೇಶ್ವರ್ ಸ್ಪಷ್ಟನೆ – vishwanews24
ಧರ್ಮಸ್ಥಳ ಪ್ರಕರಣ : ಎಸ್ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ : ಜಿ.ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಧರ್ಮಸ್ಥಳದಲ್ಲಿ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಎಸ್ಐಟಿ ತಂಡದಿಂದ ಕೆಲವು ಅಧಿಕಾರಿಗಳು ವೈಯಕ್ತಿಕ ಕಾರಣದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ. ಅವರೆಲ್ಲ ಜಬಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳು, ಅವರು ತಮ್ಮ ಕೆಲಸವನ್ನು ಮಾಡುತ್ತಾರೆ. ನನಗಾಗಲಿ, ಸರಕಾರಕ್ಕಾಗಲಿ ನಾವು ಬರುವುದಿಲ್ಲ ಎಂದು ಅವರು ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.
ಪಡುಬಿದ್ರಿ: ಆಟೋ ರಿಕ್ಷಾಕ್ಕೆ ಬಸ್ ಡಿಕ್ಕಿ : ಆಟೋ ಚಾಲಕ ಸಾವು – vishwanews24
