ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ. ಅಗತ್ಯ ಬಿದ್ದರೆ ಎಸ್.ಐ.ಟಿ ರಚನೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಹೇಳಿದ್ದರು.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೆ, ನಿಮ್ಮ ಮಾತಿನ ಮೇಲೆ ಭರವಸೆಯಿದೆ. ಆದರೆ ಈ ದಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗುದುಕೊಳ್ಳಿ. ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ” ಎಂದು ಅವರು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…