Featured

ಧರ್ಮಸ್ಥಳ ಪ್ರಕರಣ : ತನಿಖೆಯಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ: ಸಿಎಂ. ಸಿದ್ದರಾಮಯ್ಯ – vishwanews24

ಧರ್ಮಸ್ಥಳ ಪ್ರಕರಣ : ತನಿಖೆಯಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ: ಸಿಎಂ. ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಸರ್ಕಾರ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ. ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago