ಮಂಗಳೂರು : ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ಸರಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಒಂದು ಪವಿತ್ರ ಕ್ಷೇತ್ರ ಕಟ್ಟಲು ಬಹಳಷ್ಟು ಶ್ರಮವಿದೆ. ಆ ಸಂಸ್ಥೆಯಿಂದ ಹಲವರಿಗೆ ಪ್ರಯೋಜನವಾಗಿದೆ. ಇಲಾಖೆಯ ತನಿಖೆಗೆ ಎಲ್ಲರೂ ಸಹಕಾರ ಕೊಡಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಷ್ಟರ ತನಕ ಸಮಾಧಾನದಿಂದ ಕಾಯೋಣ. ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗಬಾರದು. ಕಪ್ಪು ಚುಕ್ಕೆ ತರುವುದು ಸರಿಯಲ್ಲ ಎಂದು ಅವರು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…