Featured

ಧರ್ಮಸ್ಥಳ ಪ್ರಕರಣ : ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು : ಯು.ಟಿ. ಖಾದರ್ – vishwanews24

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ : ಸ್ಪೀಕರ್ ಯು.ಟಿ. ಖಾದರ್

ಮಂಗಳೂರು : ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ಸರಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದು ಪವಿತ್ರ ಕ್ಷೇತ್ರ ಕಟ್ಟಲು ಬಹಳಷ್ಟು ಶ್ರಮವಿದೆ. ಆ ಸಂಸ್ಥೆಯಿಂದ ಹಲವರಿಗೆ ಪ್ರಯೋಜನವಾಗಿದೆ. ಇಲಾಖೆಯ ತನಿಖೆಗೆ ಎಲ್ಲರೂ ಸಹಕಾರ ಕೊಡಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಷ್ಟರ ತನಕ ಸಮಾಧಾನದಿಂದ ಕಾಯೋಣ. ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗಬಾರದು. ಕಪ್ಪು ಚುಕ್ಕೆ ತರುವುದು ಸರಿಯಲ್ಲ ಎಂದು ಅವರು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago