Featured

ಧರ್ಮಸ್ಥಳ ಪ್ರಕರಣ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ – vishwanews24

ಧರ್ಮಸ್ಥಳ ಪ್ರಕರಣ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.

ಸಾಕ್ಷಿ ದೂರುದಾರ ಚಿನ್ನಯ್ಯ ಹಾಜರುಪಡಿಸಿದ್ದ ತಲೆಬುರುಡೆ ಇದೇ ಬಂಗ್ಲೆಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ಸೌಜನ್ಯಾಳ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಂಗ್ಲಗುಡ್ಡೆಯ 12 ಎಕರೆ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಚಿಂತನೆ ನಡೆಸಿದ್ದರು. ಇದು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಅರಣ್ಯವಾಗಿರುವುದರಿಂದ ಅರಣ್ಯ ಇಲಾಖೆಯ ಎಲ್ಲ ಅನುಮತಿ ಪಡೆದುಕೊಂಡು ಎಸ್.ಐ.ಟಿ ಇಂದು ಬೆಳಗ್ಗೆ ಬಂಗ್ಲೆಗುಡ್ಡದಲ್ಲಿ ಪರಿಶೀಲನೆಗೆ ತೆರಳಿದೆ.

ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್ ಹಾಗೂ ಇತರ ಅಧಿಕಾರಿಗಳ ಜೊತೆಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡವು ಕಾರ್ಯಾಚರಣೆಗೆ ಇಳಿದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago