Featured

ಧರ್ಮಸ್ಥಳ ಪ್ರಕರಣ : ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ.- vishwanews24

ಧರ್ಮಸ್ಥಳ ಪ್ರಕರಣ : ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ.

ಮಂಗಳೂರು: ʼಧರ್ಮಸ್ಥಳʼ ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ʼಧರ್ಮಸ್ಥಳʼ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಹೇಳಿಕೆ ನೀಡಿದ್ದಾರೆ.

ಸಾಕ್ಷಿ, ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ, ಸಾಕ್ಷಿ, ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್‌ಐಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ, ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತಿತರ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದಾರೆ. ಇದರ ಆಧಾರದಲ್ಲಿ ಸ್ಥಳೀಯ ಅನೇಕರು ಸಾಕ್ಷಿ, ದೂರುದಾರರನ್ನು ಅಂದಾಜಿಸಿರುತ್ತಾರೆ. ಆದರೆ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಡಿಎಸ್ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago