Featured

ಧರ್ಮಸ್ಥಳ ಪ್ರಕರಣ: ಮುಂದುವರೆದ ಶೋಧ ಕಾರ್ಯ – vishwanews24

ಧರ್ಮಸ್ಥಳ ಪ್ರಕರಣ: ಮುಂದುವರೆದ ಕಾರ್ಯಾಚರಣೆ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪರಿಸರದಲ್ಲಿ ಶವ ಕಳೆಬರ ಹುಡುಕುವ ಕಾರ್ಯ ಮುಂದುವರೆದಿದೆ. ಎರಡನೇ ದಿನ ದೂರುದಾರ ಗುರುತಿಸಿರುವ ಎರಡನೇ ಪಾಯಿಂಟ್ ನಲ್ಲಿ ಎಸ್ ಐಟಿ ತಂಡ ಶೋಧ ಕಾರ್ಯ ಮುಂದುವರೆಸಿದೆ.

ಇಂದು ಸುಮಾರು 11ಗ‌ಂಟೆಯ ಸುಮಾರಿಗೆ ಸಾಕ್ಷಿ ದೂರುದಾರನೊಂದಿಗೆ ಎಸ್‌.ಐ.ಟಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ಆಗಮಿಸಿದೆ. 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದು ಕಚೇರಿಯ ಪ್ರಕ್ರಿಯೆಗಳನ್ನು ಮುಗಿಸಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ತಲುಪಿದೆ.

ಇಂದು ಆತ ಗುರುತಿಸಿದ ಎರಡನೆಯ ಸ್ಥಳದಲ್ಲಿ ಅಗೆಯಲು ಸಿದ್ದತೆ ನಡೆಸುತ್ತಿದ್ದಾರೆ. ಇಂದು ಅಗೆಯಲಿರುವ ಪ್ರದೇಶ ಅರಣ್ಯ ಇಲಾಖೆಗೆ ಸೇರಿದ ಜಾಗವಾಗಿರುವುದಾಗಿ ತಿಳಿದು ಬಂದಿದ್ದು, ಇಲ್ಲಿ ಹಿಟಾಚಿ ಬಳಕೆಗೆ ಅರಣ್ಯ ಇಲಾಖೆಯ ಅನುಮತಿಯಿಲ್ಲ. ಅರಣ್ಯ ಕಾನೂನುಗಳು ಹಿಟಾಚಿ ಬಳಕೆಗೆ ವಿರುದ್ದವಾಗಿದ್ದು ಈ ಕಾರಣದಿಂದಾಗಿ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ನಡೆಯಲಿದೆ.

ಇನ್ನು ದೂರುದಾರ ಎಸ್ಐಟಿ ತಂಡದ ಎದುರು ಈ ಹಿಂದೆ ಧರ್ಮಸ್ಥಳದಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೆಸರನ್ನು ಹೇಳಿದ್ದ ಎಂದು ವರದಿಯಾಗಿದ್ದು, ಎಸ್ಐಟಿ ಟೀಮ್ ಈ ಕುರಿತಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago