ಬೆಳಗಾವಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ಕೇಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ, ನಟ ಪ್ರಕಾಶ್ ರಾಜ್ ಹೆಸರನ್ನು ಕೂಡ ಉಲ್ಲೇಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ ವಿರುದ್ಧ ಶ್ರೀರಾಮಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಕನ್ನಡ ಭವನದ ಬಳಿ ಸೇರಿದ ಶ್ರೀರಾಮಸೇನೆ ಕಾರ್ಯಕರ್ತರು, ಪ್ರಕಾಶ್ ರಾಜ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕಾಶ್ ರಾಜ್ ಓರ್ವ ಧರ್ಮದ್ರೋಹಿ ಎಂದು ಕಿಡಿಕಾರಿದರು.
ಪ್ರತಿಭಟನೆ ವೇಳೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ಹೆಸರು ಕೆಡಿಸುವ ಮತ್ತು ಅದಕ್ಕೆ ಅಪಖ್ಯಾತಿ ತರುವ ದೊಡ್ಡದೊಂದು ಪಿತೂರಿಯ ಹಿಂದೆ ಬಹುಭಾಷಾ ನಟ ಪ್ರಕಾಶ್ ರಾಜ್ ಕೈವಾಡವಿದ್ದು, ಕೂಡಲೇ ವಿಶೇಷ ತನಿಖಾ ತಂಡ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ನಟನ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಬೇಕು. ಧರ್ಮಸ್ಥಳದ ತಲೆಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ಎಂಬಾತನೇ ಈ ಇಡೀ ಪ್ರಕರಣದ ಮುಖ್ಯ ಸಂಚುಕೋರ ನಟ ಪ್ರಕಾಶ್ ರಾಜ್ ಎಂದು ಹೆಸರಿಸಿದ್ದಾನೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಕಾಶ್ ರಾಜ್ ಅವರನ್ನು ವಶಕ್ಕೆ ಪಡೆಯಬೇಕು ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…