ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಕೋಟೆ ಗ್ರಾಮದ ಜೋಗಿ ಕಂಪೌಂಡ್ ನಿವಾಸಿ ಗಾಯತ್ರಿ ಆರ್. ಜೋಗಿ ಅವರಿಗೆ ಸೇರಿದ ಬ್ಯಾಗ್ ನಲ್ಲಿದ್ದ 10 ಸಾವಿರ ರೂ. ನಗದು ಹಾಗೂ 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ.
ಗಾಯತ್ರಿ ಅವರು ತನ್ನ ಮಗಳು ರಜಿತಾ, ಆಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿ ಜೊತೆ ನ.24ರಂದು ಬೆಳಗ್ಗೆ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗ್ ನಲ್ಲಿ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸ್ ನಲ್ಲಿ ಇಟ್ಟು 10 ಸಾವಿರ ನಗದನ್ನು ಇನ್ನೊಂದು ಬ್ಯಾಗ್ ನಲ್ಲಿಟ್ಟು ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗಡೆ ಹೋಗಿ ದೇವರ ದರ್ಶನ ಮುಗಿಸಿ ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ, ಜಿಪ್ ತೆರೆದುಕೊಂಡಿರುವುದು ಕಂಡುಬಂದಿತ್ತು.
ಬ್ಯಾಗ್ ನಲ್ಲಿಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ ಎರಡು ಪರ್ಸ್ ಹಾಗೂ ನಗದು ನಾಪತ್ತೆಯಾಗಿತ್ತು. ಕೂಡಲೇ ಪಾರ್ಕ್ ಮಾಡಿದ್ದ ಕಾರಿನತ್ತ ತೆರಳಿ ಹುಡುಕಾಡಿದಾಗ ಅಲ್ಲಿಯೂ ಚಿನ್ನಾಭರಣ ಪತ್ತೆಯಾಗಿರಲಿಲ್ಲ. ದೇವರ ದರ್ಶನ ಸಂದರ್ಭದಲ್ಲಿಯೇ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಯಾರೋ ಕಳವುಗೈದಿರಬೇಕೆಂದು ಗಾಯತ್ರಿ ಜೋಗಿ ಅವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…