ಧರ್ಮಸ್ಥಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ – Vishwanews24
ಧರ್ಮಸ್ಥಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ
ಧರ್ಮಸ್ಥಳ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪುತಾಪಸಿಂಹ ನಾಯಕ್ ಸ್ವಾಗತಿಸಿದರು.
