ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27 ರ ವರೆಗೆ ನಡೆಯಲಿವೆ.
ನ.25 ರಂದು ಸೋಮವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ ಎಂಬತ್ತ ಏಳನೆ ಅಧಿವೇಶನವನ್ನು ನಿಕಟಪೂರ್ವ ಲೋಕಸಭಾ ಅಧ್ಯಕ್ಷರಾದ ಸುಮಿತ್ರಾ ಮಹಾಜನ್ ಉದ್ಘಾಟಿಸುವರು.
ಇಸ್ಕಾನ್ ಸಂಸ್ಥೆಯ ಗೌರ್ ಗೋಪಾಲ ದಾಸ್ ಅಧ್ಯಕ್ಷತೆ ವಹಿಸುವರು.ಮೈಸೂರಿನ ಫೋಕಸ್ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಟಿ. ರಾಮಾನುಜಮ್, ದಿ ಟೈಮ್ಸ್ ಗ್ರೂಪ್ಸ್ ನ ಉಪ ಮಹಾಪ್ರಬಂಧಕ ಕದ್ರಿ ನವನೀತ ಶೆಟ್ಟಿ ಮತ್ತು ಪುತ್ತೂರಿನ ಖ್ಯಾತ ಲೇಖಕ ಬೊಳುವಾರು ಮಹ್ಮದ್ ಕುಂಞ ಧಾರ್ಮಿಕ ಉಪನ್ಯಾಸ ನೀಡುವರು.
ವಿದ್ವಾನ್ ಡಾ. ಕೆ. ವಾಗೀಶ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಇದೇ 26 ರಂದು ಸಾಹಿತ್ಯ ಸಮ್ಮೇಳನದ ಅಧಿವೇಶನವನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಉದ್ಘಾಟಿಸುವರು. ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸುವರು
ಸಾಹಿತಿ ಕುಮಟಾದ ಶ್ರೀಧರ ಬಳಗಾರ, ಉಡುಪಿಯ ವೀಣಾ ಬನ್ನಂಜೆ ಮತ್ತು ವಾಗ್ಮಿ ರಿಚರ್ಡ್ ಲೂಯಿಸ್ ಉಪನ್ಯಾಸ ನೀಡುವರು. ವಿದ್ವಾನ್ ಅಶೋಕ್ ಕುಮಾರ್ ಮತ್ತು ಬಳಗದವರಿಂದ ಕಥಕ್ ನೃತ್ಯ ರೂಪಕ ಪ್ರದರ್ಶನವಿದೆ. ರಾತ್ರಿ 12 ಗಂಟೆ ಬಳಿಕ ನಡೆಯುವ ಲಕ್ಷದೀಪೋತ್ಸವಕ್ಕೆ ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಭಾಗಿಯಾಗುವರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…