ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ ನಡೆದಿತ್ತು. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಕೊಡಲಿ ಪೆಟ್ಟು ಕೊಡುವ ಷಡ್ಯಂತ್ರ ನಡೆದಿತ್ತು ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದನ್ನೂ ಪರಾಮರ್ಶೆ ಮಾಡದೇ ಯಾರೋ ಬೀದಿಯಲ್ಲಿ ಹೋಗುವವರು ಹೇಳಿದರೆಂದು ಎಸ್ಐಟಿ ತನಿಖೆಗೆ ಆದೇಶಿಸಿದ್ದು ಸಮರ್ಪಕ ನಿರ್ಧಾರ ಆಗಿರಲಿಲ್ಲ ಎಂದು ಆಕ್ಷೇಪಿಸಿದರು.
ಇದನ್ನೂ ಓದಿ :
ಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಏಕಾಏಕಿ ಎಸ್ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಒಂದು ದಿನ ಮೊದಲು ಯಾವುದೇ ತನಿಖೆಯ ಅವಶ್ಯಕತೆ ಇಲ್ಲ ಎಂದಿದ್ದರು. ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿದ ನಂತರ ಮುಖ್ಯಮಂತ್ರಿಯವರೇ ಎಸ್ಐಟಿ ತನಿಖೆಗೆ ಆದೇಶಿಸಿದ್ದರು ಎಂದು ಆರೋಪಿಸಿದರು.
ಈ ಪ್ರಕರಣದಲ್ಲಿ ನೂರಾರು ಕೋಟಿ ರೂ. ಒಳಗೊಂಡದ್ದು ಈಗ ಗೊತ್ತಾಗುತ್ತಿದೆ. ಈ ಕಾರಣಕ್ಕೆ ವಿದೇಶಿ ಶಕ್ತಿಗಳ ಕೈವಾಡದ ತನಿಖೆಯೂ ಆಗಬೇಕಿದೆ ಎಂದು ವಿಜಯೇಂದ್ರ ಒತ್ತಾಯಿಸಿದರು.
ಇದನ್ನೂ ಓದಿ :
ಕಾಂಗ್ರೆಸ್ ಸರಕಾರವು ಇಂಥ ಷಡ್ಯಂತ್ರಗಳಿಗೆ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮಗೆ ನೋವು ತಂದಿದೆ. ಯಾರ್ಯಾರು ಇದರ ಹಿಂದಿದ್ದರು? ಯಾರ್ಯಾರು ಬಂಡವಾಳ ಹಾಕಿದ್ದರು? ಅಂದಿನ ಸಿಎಂ ಯಾಕೆ ಕಣ್ಮುಚ್ಚಿ ಎಸ್ಐಟಿಗೆ ಕೊಟ್ಟರು- ಇವೆಲ್ಲದರ ಸತ್ಯಾಸತ್ಯತೆ ಹೊರಕ್ಕೆ ಬರಬೇಕು ಎಂಬುದು ಅವರು ಒತ್ತಾಯಿಸಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್ಐಆರ್ ಬಗ್ಗೆ ಚರ್ಚೆಗಳಾಗಿವೆ. ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದ ಬಳಿಕ ಎಸ್ಐಆರ್ ನಡೆಯುತ್ತಿದ್ದು, ರಾಜ್ಯ ಸರಕಾರ ಇದಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದೆ ಎಂಬ ಅಭಿಪ್ರಾಯ ಎಲ್ಲ ಮುಖಂಡರಿಂದ ವ್ಯಕ್ತವಾಗಿದೆ ಎಂದು ವಿಜಯೇಂದ್ರ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯ ಸರಕಾರವು ಬಿಎಲ್ ಒಗಳಿಗೆ ಸಮರ್ಪಕ ಆದೇಶ, ಮಾರ್ಗದರ್ಶನ ಮಾಡುತ್ತಿಲ್ಲ. ಡುಪ್ಲಿಕೇಟ್ ಹೆಸರು, ಸತ್ತವರ ಹೆಸರು ಕೈಬಿಡುವ ಕೆಲಸ ನಡೆಯಬೇಕಿದೆ. ಬಿಎಲ್ ಒಗಳನ್ನು ದುರುಪಯೋಗ ಪಡಿಸಿಕೊಂಡು, ಸ್ವಚ್ಛಗೊಳಿಸುವ ಕಾರ್ಯ ಕರ್ನಾಟಕದಲ್ಲಿ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ಆಕ್ಷೇಪ ಇದೆ ಎಂದು ಅವರು ಹೇಳಿದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…