ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.
ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…