Featured

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ! – vishwanews24

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ!

ಬೆಳ್ತಂಗಡಿ,:ಕಾರ್ಯಾಚರಣೆಯ 3ನೇ ದಿನವಾದ ಇಂದು ಗುರುವಾರ ಆರನೇ ಸ್ಥಳದಲ್ಲಿ ಉತ್ಖನನ ಮಾಡುವ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 3ನೇ ದಿನದ ಶೋಧ ಕಾರ್ಯದ ವೇಳೆ ಕೆಲವು ಅವಶೇಷಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗುತ್ತಿದೆ. ಆದರೆ ಈ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೂರುದಾರ ಗುರುತಿಸಿರುವ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಆರನೇ ಸ್ಥಳದಲ್ಲಿ ಅಗೆಯುವ ವೇಳೆ ಕೆಲವು ಎಲುಬಿನ ಚೂರುಗಳು ಲಭಿಸಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ.

ಎಸ್ಐಟಿ ಅಧಿಕಾರಿಗಳು ಗುರುವಾರ ದೂರುದಾರ ಗುರುತಿಸಿರುವ 13 ಸ್ಥಳಗಳ ಪೈಕಿ ನೇತ್ರಾವತಿ ನದಿಯ ಬದಿಯಲ್ಲಿರುವ 6ನೇ ಜಾಗದಲ್ಲಿ ಅಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಮೊದಲು ಎರಡು ದಿನಗಳಲ್ಲಿ ಸಾಕ್ಷಿ ದೂರುದಾರ ಗುರುತಿಸಿದ್ದ ಐದು ಜಾಗಗಳಲ್ಲಿ ಎಸ್ಐಟಿ ಅಗೆದ ವೇಳೆ ಮೃತದೇಹದ ಯಾವುದೇ ಅವಶೇಷಗಳು ಸಿಕ್ಕಿರಲಿಲ್ಲ. ಕಾರ್ಯಾಚರಣೆಯ 3ನೇ ದಿನವಾದ ಗುರುವಾರ ಆರನೇ ಸ್ಥಳದಲ್ಲಿ ಉತ್ಖನನ ಮಾಡುವ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago