Featured

ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು -Vishwanews24

ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು -Vishwanews24

ನೋಂದಣಿದಾರರಿಗೆ ಪರ್ಯಾಯ ವ್ಯವಸ್ಥೆ..

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ.29ರಂದು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ಮಾರ್ಗಸೂಚಿ ಗಮನದಲ್ಲಿರಿಸಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬದಲಾಗಿ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದ ಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕರ್ತರ ಮೂಲಕ ವಧುವಿನ ಮನೆಗೆ ತಲುಪಿಸಲಾಗುವುದು.

ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24

ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ಊರ ದೇವರ ಅಥವಾ ಕುಲದೇವರ ಸನ್ನಿಧಿಗಳಲ್ಲಿ ಶಾಸ್ತ್ರೋಕ್ತವಾಗಿ ಏ. 29 ರಂದು ನಿಗದಿಯಾಗಿರುವ ಗೋಧೂಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಹಾಗೂ ಮುಹೂರ್ತದಲ್ಲಿ ಮದುವೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮದುವೆಯನ್ನು ಸರಳವಾಗಿ ಸರಕಾರದ ಕೋವಿಡ್ ನಿಯಮಾವಳಿಯಂತೆ ನಡೆಸಲು ತಿಳಿಸಲಾಗಿದೆ.

ಮದುವೆ ಸಂದರ್ಭ ಯೋಜನೆಯ ಕಾರ್ಯಕರ್ತರೊಬ್ಬರು ಹಾಜರಿರುವರು. ಬಳಿಕ ಕಾನೂನಿನಂತೆ ವಿವಾಹ ನೋಂದಣಿಯನ್ನು ತಾಲೂಕಿನ ಉಪ ನೋಂದಣಿ ಅಧಿಕಾರಿ ಅವರಲ್ಲಿ ಮಾಡಿಸಿಕೊಳ್ಳಲು ಸೂಚಿಸಿದೆ. ಅನಂತರ ವಿವಾಹ ನೋಂದಣಿ ದಾಖಲಾತಿ ಪತ್ರದ ಜೆರಾಕ್ಸ್ ಪ್ರತಿಯನ್ನು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಅರ್ಪಿಸಲು ಕ್ಷೇತ್ರಕ್ಕೆ ಕಳುಹಿಸಿಕೊಡುವಂತೆ ತಿಳಿಸಲಾಗಿದೆ.

ಕಾಂಗ್ರೆಸ್‌ ಮುಖಂಡ ಮಧು ಬಂಗಾರಪ್ಪ ಗೆ ಕೊರೊನಾ ಪಾಸಿಟಿವ್ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago