ಬೆಳ್ತಂಗಡಿ: ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರು ತನಿಖೆಗೆ ಒಪ್ಪಿಗೆ ಸೂಚಿಸಿದೆ.
ಮರು ತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿದ ದೇಶದ ಅತ್ಯುನ್ನತ ನ್ಯಾಯಾಲಯವು ತನ್ನ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ.
ಇದನ್ನೂ ಓದಿ :
ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿಯೇ ಈ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ತನಿಖಾ ಸಂಸ್ಥೆ ಹಾಗೂ ತನಿಖೆಯ ಸ್ವರೂಪದ ಕುರಿತು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ವಿಸ್ತ್ರತವಾದ ನಿರ್ದೇಶನಗಳನ್ನು ನೀಡಲಿದೆ.
ದಶಕದ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿದೆ.
ಇದನ್ನೂ ಓದಿ :
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…