ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಬಹುದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿತಾ ಅನ್ನೋ ಕುತೂಹಲ ಶುರುವಾಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್ ನೀಡಿರುವುದು ಇದಕ್ಕೆ ಕಾರಣವಾಗಿದೆ.
ಕರ್ನಾಟಕ ಪೊಲೀಸ್, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್‌ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಉದಯ್ ಕುಮಾರ್ ಜೈನ್ ಹೇಳಿದ್ದಾರೆ.
ಇದು ಬುರುಡೆ ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ. ಒಂದು ವಿಡಿಯೋನಲ್ಲಿ ಸೌಜನ್ಯ ಕೊಲೆಯಾದ ಸಂದರ್ಭದಲ್ಲಿ ನಾನು ಇರಲಿಲ್ಲ ಅಂತ ಒಂದು ವಿಡಿಯೋನಲ್ಲಿ ಹೇಳಿದ್ದಾನೆ. ಮತ್ತೊಂದು ವಿಡಿಯೋನಲ್ಲಿ ನಾನೇ ಆಕೆಯನ್ನ ಹೊತ್ಕೊಂಡು ಹೋಗೋದು ನೋಡಿದ್ದೇನೆ ಅಂತ ಹೇಳಿದ್ದಾನೆ. ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿದ್ದಾನೆ. ಈಗ ಸೌಜನ್ಯ ಪ್ರಕರಣದಲ್ಲಿ ನನ್ನ ಬಗ್ಗೆ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಗುಂಡಿ ಎಲ್ಲಾ ತೋಡಿಯಾಗಿದೆ, ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನಲೆಗೆ ತರುತ್ತಿದ್ದಾರೆ. ಸಿಐಡಿ, ಸಿಬಿಐ ನನ್ನನೂ ತನಿಖೆ ನಡೆಸಿದ್ದಾರೆ. ಬ್ರೈನ್ ಮ್ಯಾಪಿಂಗ್ ಕೂಡ ಮಾಡಿದ್ದಾರೆ, ಇವತ್ತು ಮತ್ತೆ ಎಸ್‌ಐಟಿ ಕರೆದಿದ್ದಾರೆ. ನಾವು ಯಾವುದೇ ವಿಚಾರಣೆಗೂ ಸಿದ್ಧ ಎಂದು ಉದಯ್ ಕುಮಾರ್ ಜೈನ್ ಹೇಳಿದ್ದಾರೆ.
ಸೌಜನ್ಯ ಸತ್ತು ಒಂದು ವರ್ಷದ ನಂತರ ನಮ್ಮ ಹೆಸರು ಸೇರಿಸುವ ಕುತಂತ್ರ ನಡೆಯಿತು. ಆದ್ರೆ ಲೋಕಲ್ ಪೊಲೀಸ್ ತನಿಖೆ ವೇಳೆ ಎಫ್‌ಐಆರ್‌ನಲ್ಲಿ ನನ್ನ ಹೆಸರೇ ಇರಲಿಲ್ಲ. ಗೌರ್ಮೆಂಟ್ ವಕೀಲನನ್ನ ಕ್ಯಾಚ್ ಮಾಡಿ ಕುತಂತ್ರ ನಡೆಸಿದ್ರು. ಈಗ ನಮ್ಮನ್ನೆಲ್ಲಾ ದಿಕ್ಕಾಪಾಲು ಮಾಡಿ ಸೌಜ್ಯ ತಾಯಿ ದೊಡ್ಡ ಮನೆಯಲ್ಲಿ ಆರಾಮಾಗಿದ್ದಾರೆ. ಅವರ ಮನೆ ಮೇಲೂ ಇಡಿ ರೇಡ್ ಆಗಬೇಕು ಅಂತ ಒತ್ತಾಯಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…