ಧರ್ಮಸ್ಥಳ:ರಾಜ್ಯ ಸಾರಿಗೆ ಬಸ್ಸೊಂದು ಬೊಲೆರೋದಿಂದ ಇಳಿದು ನಿಂತಿದ್ದವರಿಗೆ ಹಾಗೂ ಬೊಲೆರೋ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು , ಮಗು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬದಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಚೆನ್ನಸಂದ್ರ ನಿವಾಸಿ ಮಹದೇವ(63) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಜನ ಮಹಿಳೆಯರು , ಓರ್ವ ಗಂಡಸು ,ಒಂದು ಮಗು ಸೇರಿ ಏಳು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…