ಬೆಂಗಳೂರು, : ವಿಧಾನ ಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ”ನನ್ನ ಸ್ನೇಹಿತ ನನ್ನನ್ನು ಅಗಲಿದ್ದಾರೆ, ಈ ದಿನ ನನಗೆ ಮರೆಯಲಾಗದು” ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.
ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್ ಕೂಡಾ ಪತ್ತೆಯಾಗಿದ್ದು ಅದರಲ್ಲಿ ಇತ್ತೀಚಿಗೆ ವಿಧಾನ ಪರಿಷತ್‌ನಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ನಡೆದ ಗಲಾಟೆಯ ವೇಳೆ ಧರ್ಮೇಗೌಡ ಅವರನ್ನು ಎಳೆದಾಡಿದ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ.
ಧರ್ಮೇಗೌಡ ಅವರ ನಿಧನಕ್ಕೆ ಸಂಬಂಧಿಸಿ ಬೆಂಗಳೂರಿನ ಜೆ.ಪಿ.ನಗರದಲ್ಲಿ ತಮ್ಮ ನಿವಾಸದ ಹೊರಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹೆಚ್‌ಡಿಕೆ, ”ಧರ್ಮೇಗೌಡ ನನ್ನ ಒಡಹುಟ್ಟಿದ ಸೋದರನಂತೆ. ಅವರ ತಂದೆ ನಾನಂತೂ ಮಂತ್ರಿಯಾಗಿಲ್ಲ, ನಾನು ಬದುಕಿರುವಾಗ ನನ್ನ ಪುತ್ರನಾದರೂ ಮಂತ್ರಿಯಾಗಬೇಕು ಎಂದು ಹೇಳಿದ್ದರು. ಆದರೆ ಅವರು ಮಂತ್ರಿಯಾಗಲಿಲ್ಲ” ಎಂದು ಹೇಳಿದರು.
”ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಹೋದ ಸಂದರ್ಭ ಇವರು ಕೂಡಾ ಕಾಂಗ್ರೆಸ್‌ಗೆ ಹೋಗಲು ತೀರ್ಮಾನಿಸಿದ್ದರು. ಆದರೆ ನಾನು ಹೆಚ್‌ಡಿಕೆ ಬೇಕಾ, ಎಂಎಲ್‌ಎ ಸ್ಥಾನ ಬೇಕಾ ಎಂದು ಕೇಳಿದ್ದೆ. ಆ ಮಾತುಗಳನ್ನು ಕೇಳಿದ ಅವರು, ತಮ್ಮ ತೀರ್ಮಾನ ಬದಲಿಸಿ ಜೆಡಿಎಸ್‌ನಲ್ಲಿಯೇ ಉಳಿದುಕೊಂಡರು” ಎಂದು ಹೇಳಿ ಕಣ್ಣೀರು ಹಾಕಿದರು.
”ವಿಧಾನ ಪರಿಷತ್‌ನಲ್ಲಿ ನಡೆದ ಘಟನೆಯನ್ನು ನೆನೆದು ಧರ್ಮೇಗೌಡರು ಮನ ನೊಂದಿದ್ದರು. ಅದನ್ನೇ ಆಗಾಗ ಹೇಳುತ್ತಿದ್ದರು. ರಾಜಕೀಯ ಸ್ಥಿತಿಗತಿ ಬಗ್ಗೆ ಮಾತನಾಡುತ್ತಿದ್ದರು” ಎಂದು ಹೇಳಿದ ಅವರು, ”ಇದು ರಾಜಕಾರಣದ ಕೊಲೆ” ಎಂದು ಹೆಚ್‌ಡಿಕೆ ಆರೋಪಿಸಿದರು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…