Featured

ಧಾರವಾಡ : ವೈದ್ಯಕೀಯ ಕಾಲೇಜಿನಲ್ಲಿ 77 ಮಂದಿಯಲ್ಲಿಸೋಂಕು ದೃಢ – Vishwanews24

ಧಾರವಾಡ : ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಆರ್ಭಟ ; 77 ಮಂದಿಯಲ್ಲಿಸೋಂಕು ದೃಢ – Vishwanews24

ಧಾರವಾಡ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ 77 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಶುಕ್ರವಾರ ರಾತ್ರಿಯವರೆಗೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಈಗ 77 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ನಿತೀಶ್‌ ಜೆ ಪಾಟೀಲ್‌ ಮಾಹಿತಿ ನೀಡಿದ್ದು, “ಎಲ್ಲರಿಗೂ ಚಿಕಿತ್ಸೆ ಔಷಧೋಪಚಾರ ನಡೆಯುತ್ತಿದೆ. ಸೋಂಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರನ್ನು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. 1,822 ಮಂದಿಯ ತಪಾಸಣೆ ವರದಿ ಇನ್ನು ಬರಬೇಕಿದೆ” ಎಂದಿದ್ದಾರೆ.

“ವರದಿಯಾಗಿರುವ 281 ಪ್ರಕರಣಗಳ ಪೈಕಿ ಆರು ಮಂದಿಯಲ್ಲಿ ಮಾತ್ರವೇ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಮಂದಿಯಲ್ಲಿ ರೋಗದ ಲಕ್ಷಣಗಳಿಲ್ಲ. ಯಾವುದೇ ಸಾವು ಸಂಭವಿಸಿಲ್ಲ” ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆ ಭಾನುವಾರದ ತನಕ ಎಸ್‍ಡಿಎಂ ಹೊರರೋಗಿಗಳ ವಿಭಾಗದ ಸೇವೆ ಸ್ಥಗಿತಗೊಳಿಸಲಾಗಿದೆ. ತುರ್ತು ಚಿಕಿತ್ಸಾ ಸೇವೆ ಮುಂದುವರೆಯಲಿದ್ದು, ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.

“ಕೊರೊನಾ ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಎಸ್‌ಡಿಎಂ ಆಡಳಿತ ಮಂಡಳಿಯು ಕೂಡಲೇ ಸ್ಪಷ್ಟ ಕ್ರಿಯಾಯೋಜನೆ ರೂಪಿಸಿಕೊಂಡು ಆಸ್ಪತ್ರೆ ಆವರಣಕ್ಕೆ ಆಯ್ದ ಕೆಲವು ವೈದ್ಯರು ಹಾಗೂ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು” ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ರವಿಕುಮಾರ ಸುರಪುರ ಹೇಳಿದ್ದಾರೆ.

ಎಸ್‌ಡಿಎಂ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಕಾಲೇಜಿನ ಸುತ್ತಲಿನ 500 ಮೀ. ವ್ಯಾಪ್ತಿಯ ಶಾಲೆ ಕಾಲೇಜುಗಳಿಗೆ ಭಾನುವಾರದವರೆಗೆ ರಜೆ ಘೋಷಿಸಲಾಗಿದೆ

Vishwa News 24

Recent Posts

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 minutes ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

18 minutes ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

37 minutes ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

43 minutes ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

53 minutes ago

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

15 hours ago