ಧಾರಾಕಾರವಾಗಿ ಸುರಿಯುತ್ತಿರುವ ಮಳೆ : ಉಡುಪಿ ಜಿಲ್ಲೆಯಲ್ಲಿ ಕೃತಕ ನೆರೆಸೃಷ್ಟಿ -Vishwanews24
ಉಡುಪಿ: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಕೃತಕ ನೆರೆ ಸಂಭವಿಸಿ ಅವಾಂತರ ಸೃಷ್ಟಿಸಿದೆ.
ನಿರಂತರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ ಮಳೆಯಿಂದ ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳಲ್ಲಿಯೂ ನೀರು ತುಂಬಿಕೊಂಡಿದೆ.
24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತೀ ಹೆಚ್ಚು ದಾಖಲಾಗಿದ್ದು, 155 ಮಿಲಿಮೀಟರ್ ಮಳೆ ಸುರಿದಿದೆ. ಇನ್ನು ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದೆ.

