Featured

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ರಸ್ತೆ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಿದ ಶ್ರೀಲಂಕಾ ಪ್ರಧಾನಿ -Vishwanews24

ಮಂಗಳೂರು:  ಬೆಳಿಗ್ಗೆಯಿಂದಲೇ‌ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕಾರಣ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಸ್ತೆ ಮೂಲಕ ಕೊಲ್ಲೂರಿಗೆ ತೆರಳಿದ್ದಾರೆ.

ನಗರದ‌ ಹಲವೆಡೆ ನೀರು ತುಂಬಿಕೊಂಡಿದ್ದು, ಜನರು ಓಡಾಡಲು ತೊಂದರೆ ಅನುಭವಿಸುವಂತಾಗಿದೆ. ನಗರದ ಸೆಂಟ್ರಲ್‌ ರೈಲು ನಿಲ್ದಾಣದ ಆವರಣದಲ್ಲಿ ನೀರು ತುಂಬಿಕೊಂಡಿದ್ದು,‌ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ‌ಪಾರ್ಕಿಂಗ್‌ ಸ್ಥಳವು ಸಂಪೂರ್ಣ ಜಲಾವೃತಗೊಂಡಿದೆ.

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಅವರ ಕೊಲ್ಲೂರಿನ ಅವರ ಪ್ರಯಾಣ ನಿಗದಿಯಾಗಿತ್ತು. ಆದರೆ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆಯಿಂದಲೇ ತೀವ್ರ ಮಳೆಯ ಕಾರಣ, ಹೆಲಿಕಾಪ್ಟರ್ ಮೂಲಕ ಕೊಲ್ಲೂರು ಪ್ರಯಾಣ ಕೊನೆ ಕ್ಷಣದಲ್ಲಿ ಬದಲಾವಣೆಗೊಂಡು ಅವರು ರಸ್ತೆ ಮೂಲಕ ಇದೀಗ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಈ ಹಿನ್ನಲೆಯಲ್ಲಿ ರಸ್ತೆಯುದ್ದಕ್ಕೂ ತೀವ್ರ ಭದ್ರತೆ ಏರ್ಪಡಿಸಲಾಗಿದೆ.

ವಿಕ್ರಂ ಸಿಂಘೆ ಆಗಮನದ ಪ್ರಯುಕ್ತ ಭದ್ರತಾ ಹಿತದೃಷ್ಟಿಯಿಂದ ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2.30ರ ವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago