ಮುಂಬೈ : ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ.
ನಟ ರಣಬೀರ್ ಕಪೂರ್, ನಟಿ ಆಲಿಯಾ ಭಟ್ ಹಾಗೂ ಅವರ ಕುಟುಂಬದ ಸದಸ್ಯರು ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬಳಿಕ ನಟ ಹಾಗೂ ಆತನ ಕುಂಟುಬಸ್ಥರ ವಿರುದ್ಧ ದೂರು ದಾಖಲಾಗಿದೆ.
ಸಂಜಯ್ ತಿವಾರಿ ಎಂಬುವವರು ನಟ ಹಾಗೂ ಆತನ ಕುಟುಂಬಸ್ಥರ ವಿರುದ್ಧ ತಮ್ಮ ವಕೀಲರಾದ ಆಶಿಶ್ ರಾಯ್ ಹಾಗೂ ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋದಲ್ಲಿ ಮದ್ಯ ಸುರಿದ ಕೇಕ್ ಮೇಲೆ ಬೆಂಕಿ ಹಚ್ಚಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೇಕ್ ಮೇಲೆ ಮದ್ಯ ಸುರಿದಿದ್ದು ನಟ ರಣಬೀರ್ ಕಪೂರ್ ಅವರು ಬೆಂಕಿ ಹಚ್ಚಿ ಬಳಿಕ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ. ಹಿಂದೂ ಧರ್ಮದಲ್ಲಿ ಇತರ ದೇವತೆಗಳನ್ನು ಆವಾಹನೆ ಮಾಡುವ ಮುನ್ನ ಅಗ್ನಿ ದೇವರನ್ನು ಆವಾಹನೆ ಮಾಡುವ ಸಂಪ್ರದಾಯವಿದೆ. ಆದರೆ ನಟ ಹಾಗೂ ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಣೆ ಮಾಡುವಾಗ ಉದ್ದೇಶಪೂರ್ವಕವಾಗಿ ಮದ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಹೇಳಿದ್ದಾರೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ದೂರು ನೀಡಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…