ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಂಬರುವ ಬೈ ಎಲೆಕ್ಷನ್‍ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.
ಹಾಗೆಯೇ ಪದೇ ಪದೇ ಆಪರೇಷನ್ ಕಮಲದ ಕುರಿತು ಪ್ರಿಯಾಂಕ್ ಅವರು ಮಾತನಾಡುವುದು ಸರಿಯಲ್ಲ. ನಾನು 50 ಲಕ್ಷ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಅವರ ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ. ನಾನು ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ಉನ್ನತ ತನಿಖೆಗೂ ನಾನು ಸಿದ್ಧ. ಸುಮ್ಮನೆ ಸುಳ್ಳು ಆರೋಪ ಮಾಡೋದು ಪ್ರಿಯಾಂಕ್ ಅವರಿಗೆ ಶೋಭೆತರಲ್ಲ. ಸುಳ್ಳು ಹೇಳಿ ಸಣ್ಣತನ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…