ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಧ್ರುವನಾರಾಯಣ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ ಎಂದಿದ್ದಾರೆ.
ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದು ಹೇಳಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…