ಧ್ರುವನಾರಾಯಣ ನಿಧನ – ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ : ಬಿಎಸ್ ವೈ ಸಂತಾಪ – Vishwanews24

Featured, ರಾಜ್ಯ ನ್ಯೂಸ್

ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ : ಧ್ರುವನಾರಾಯಣ ನಿಧನಕ್ಕೆ ಬಿಎಸ್ ವೈ ಸಂತಾಪ

ಮೈಸೂರು : ಕಾಂಗ್ರೆಸ್ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ, ಜನಪ್ರಿಯ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಆರ್.ಧ್ರುವನಾರಾಯಣ ಅವರು ಇಂದು ಹಠಾತ್ ನಿಧನರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ.

ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Leave a Reply