ಉಡುಪಿ : ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಸೆಲ್ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ ಬರೆದಿದೆ.
ಮುಂಜಾನೆ 3:00ಗಂಟೆ ಸುಮಾರಿಗೆ ಮೆರವಣಿಗೆಯ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿಯವರ ಕೈಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಆರೆಸ್ಸೆಸ್ ಧ್ವಜ (ಭಗವಾನ್‌ಧ್ವಜ) ಹಸ್ತಾಂತರಿಸಿದ್ದು, ಅವರು ಈ ಧ್ವಜವನ್ನು ಕೈಯಲ್ಲಿ ಹಿಡಿದು ಮೇಲಕ್ಕೆ ಎತ್ತಿ ಪ್ರದರ್ಶಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ್ದರು ಎಂದು ಕಾಂಗ್ರೆಸ್ ಕಾನೂನು ಸೆಲ್‌ನ ಅಧ್ಯಕ್ಷ ಹರೀಶ್ ಶೆಟ್ಟಿ ಜ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದ ಪ್ರತಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯ ಕಾರ್ಯದರ್ಶಿ ಅವರಿಗೂ ಕಳುಹಿಸಲಾಗಿದೆ.
ಜಿಲ್ಲಾಧಿಕಾರಿಯವರ ಈ ನಡೆ ಸರಕಾರಿ ಸೇವಾ ನಿಯಮಗಳು ಹಾಗೂ ಸಂವಿಧಾನದ ಧರ್ಮ ನಿರಪೇಕ್ಷತೆಯ ತತ್ವಗಳಿಗೆ ವಿರುದ್ಧವಾಗಿದ್ದು, ಈ ರೀತಿಯ ನಡೆ ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಹೇಳಿದ್ದಾರೆ.
ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಹರೀಶ್ ಶೆಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…