ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ.
ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.
ಆಜಾನ್ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್ ಚಾಲೀಸಾ ಮೊಳಗಿದೆ. ಆಜಾನ್ ವರ್ಸಸ್ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…