ಬೆಂಗಳೂರು: ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್ ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ಸಿಎಂ ಈ ಕ್ರಮ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಇದರ ಜೊತೆಗೆ, ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ ಪರಿಹಾರವನ್ನೂ ಸಿಎಂ ಘೋಷಿಸಿದ್ಧಾರೆ. ಅವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು. ಸರ್ಕಾರದ ಇತರ ಸೌಲಭ್ಯವನ್ನು ಶೀಘ್ರದಲ್ಲೇ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ವೈದ್ಯಾಧಿಕಾರಿ ನಾಗೇಂದ್ರ ನಿನ್ನೆ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದರು. ಇವರ ಸಾವು ಇದೀಗ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಕುರಿತು ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಾತನಾಡಿದ್ದ ಸಚಿವ ಡಾ| ಕೆ. ಸುಧಾಕರ್, “ವೈದ್ಯಾಧಿಕಾರಿಯ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು. ನಾಗೇಂದ್ರ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೂಡ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಮೃತರ ಕುಟುಂಬದೊಂದಿಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ವೈದ್ಯಾಧಿಕಾರಿಗಳ ಸಂಘದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಿಕೊಡಲಾಗುವುದು” ಎಂದು ಭರವಸೆ ನೀಡಿದ್ದರು.
ಹಾಗೆಯೇ, ನಾಗೇಂದ್ರ ಅವರ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ ನೀಡುವುದಾಗಿ ಡಾ. ಸುಧಾಕರ್ ತಿಳಿಸಿದ್ದರು. ಆದರೆ, ವಿಶೇಷ ಸಂದರ್ಭವೆಂದು ಪರಿಗಣಿಸಿ ಪರಿಹಾರ ಹಣವನ್ನು 50 ಲಕ್ಷ ರೂಗೆ ಏರಿಸಲಾಗಿದೆ.
ಡಾ. ಎಸ್.ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಿ ಆಸ್ಪತ್ರೆ ವೈದ್ಯರು ಇಂದು ಬೆಳಗ್ಗೆ ಪ್ರತಿಭಟನೆ ಮುಂದುವರಿಸಿದರು. ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಯಾರೊಬ್ಬರೂ ಕೆಲಸ ಮಾಡುವುದಿಲ್ಲ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ಯಾವುದೇ ಚಿಕಿತ್ಸೆ ನೀಡುವುದಿಲ್ಲ ಎಂದು ಆರೋಗ್ಯ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…